×
Ad

ಗ್ರಾಪಂ ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ

Update: 2021-12-22 19:28 IST

ಉಡುಪಿ, ಡಿ.22: ಗ್ರಾಮ ಪಂಚಾಯತ್ ಉಪ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 27ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಪಂ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ಅನ್ವಯ ಮೇಲಿನ ಗ್ರಾಪಂಗಳ ವ್ಯಾಪ್ತಿಯಲ್ಲಿ ಡಿ.25ರ ಸಂಜೆ 5:00ರಿಂದ ಡಿ.27ರ ಸಂಜೆ 5:00ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News