×
Ad

ಶಿವಮೊಗ್ಗ: ಮೇಯರ್ ಗೆ ಕೊರೋನ ದೃಢ

Update: 2021-12-22 22:36 IST

ಶಿವಮೊಗ್ಗ, ಡಿ.22: ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಡಿ.16ರಂದು ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಜ್ವರ ಹಿನ್ನೆಲೆ ಅವರು ಡಿ.15ರಂದು ಮೇಯರ್ ಅವರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. 16ಕ್ಕೆ ಪಾಸಿಟಿವ್ ಇರುವುದು ಗೊತ್ತಾಗಿದೆ.

16ರಂದು ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಅವರು ಭಾಗವಹಿಸಿದ್ದರು. ತದನಂತರ, ಕೊರೊನಾ ಪಾಸಿಟಿವ್ ಬಂದಿದ್ದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೇಯರ್ ಗಳಿಗೋಸ್ಕರ ಕರೆದಿದ್ದ ಕಾರ್ಯಕ್ರಮದಲ್ಲೂ ಭಾಗವಹಿಸಿಲ್ಲ.

ಪ್ರಥಮ ಪ್ರಜೆಯಾದ ಮೇಯರ್ ಅವರು ತಮಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಕನಿಷ್ಠ ತಿಳಿಸಿ, ಅವರ ಸಂಪರ್ಕದಲ್ಲಿದ್ದವರಿಗೆ ಮಾಹಿತಿ ನೀಡಬೇಕಿತ್ತು. ಈ ಕೆಲಸವನ್ನು ಮಾಡದೇ ಇರುವುದರಿಂದ ಪಾಲಿಕೆಯಲ್ಲೂ ಹಲವರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ.

ಮೂವರಲ್ಲಿ ಕೊರೊನಾ ಪಾಸಿಟಿವ್: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಅದರಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದಾರೆ. ಎರಡೂ ಭದ್ರಾವತಿಯದ್ದೇ ಆಗಿವೆ. ಇನ್ನೊಂದು ಪ್ರಕರಣ ಹೊಸನಗರದಲ್ಲಿ ಪತ್ತೆಯಾಗಿದೆ. ಪ್ರಸ್ತುತ ಒಟ್ಟು 50 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News