ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ ಕೋರ್ಟ್‍ನಿಂದ 20 ವರ್ಷ ಜೈಲು ಶಿಕ್ಷೆ

Update: 2021-12-23 15:13 GMT

ಕಲಬುರಗಿ, ಡಿ.23: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಕಲಬುರಗಿ 2ನೆ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ಕೋರ್ಟ್ ತೀರ್ಪು ನೀಡಿದೆ.

ಅಂಬರೀಶ ಹೂನಳ್ಳಿ ಶಿಕ್ಷೆಗೆ ಗುರಿಯಾದ ಆಪಾದಿತ. ಎರಡು ವರ್ಷದ ಹಿಂದೆ ಕಲಬುರಗಿ ಜಿಲ್ಲೆಯ ಅಪಜಲಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಕರಜಗಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅಂಬರೀಶ ಅಪಹರಿಸಿ ಬಂಧನದಲ್ಲಿಟ್ಟು ನಿರಂತರ ಅತ್ಯಾಚಾರವೆಸಗಿದ್ದ. ಈ ಕುರಿತು ನೊಂದ ಬಾಲಕಿಯ ತಂದೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 

ದೂರಿನ ಅನ್ವಯ ಸಿಪಿಐ ಮಹಾಂತೇಶ ಪಾಟೀಲ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಾದ ಪ್ರತಿವಾದ ಆಲಿಸಿದ ಕಲಬುರಗಿ ಕೋರ್ಟ್ ವಿವಿಧ ಐಪಿಸಿ ಸೆಕ್ಷನ್ ಅಡಿ ಆರೋಪಿಗೆ 20ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News