ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೆಶ ನಿರ್ಬಂಧ
Update: 2021-12-23 20:49 IST
ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಹಿನ್ನೆಲೆ ಡಿ.30ರ ಸಂಜೆ 6ರಿಂದ ಜ.2ರ ವರೆಗೆ ಚಿಕ್ಕಬಳ್ಳಾಪುರದ ಪ್ರವಾಸಿಗರ ತಾಣ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ವರ್ಷಾಚರಣೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರುನಂದಿ ಬೆಟ್ಟಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.