×
Ad

ಮತದಾರರ ಪಟ್ಟಿಯ ಸಮಸ್ಯೆಗೆ ಉಚಿತ ಸಹಾಯವಾಣಿ 1950

Update: 2021-12-23 21:57 IST

ಉಡುಪಿ, ಡಿ.23:ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2022ಕ್ಕೆ ಸಂಬಂದಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ಬದಲಾಯಿಸಿಕೊಳ್ಳುವುದು ಸೇರಿದಂತೆ ಮತದಾರರ ಪಟ್ಟಿಯ ಕುರಿತು ಎಲ್ಲಾ ಸಂದೇಹಗಳು ಮತ್ತು ಸಮಸ್ಯೆಗಳ ನಿವಾರಣೆಗೆ ಉಚಿತ ಸಹಾಯವಾಣಿ ಸಂಖ್ಯೆ 1950ನ್ನು ಸಂಪರ್ಕಿಸಬಹುದು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಇದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಿದ್ದು, ಸಾರ್ವಜನಿಕರು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ತಮ್ಮ ಸಮಸ್ಯೆಗಳನ್ನು ಉಚಿತ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಿ ಬಗೆಹರಿಸಿಕೊಳ್ಳಬಹುದಾಗಿದೆ.

ಈ ಕೇಂದ್ರವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಮುಕ್ತಾಯವಾಗುವವರೆಗೆ ಕಾರ್ಯ ನಿರ್ವಹಿಸಲಿದ್ದು, ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳ್ಳುವ ಯುವ ಮತದಾರರು ತಮ್ಮ ಸಂದೇಹಗಳು ಮತ್ತು ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಕೂಡ ಇದು ನೆರವಾಗಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News