ವಿಟ್ಲ, ಕೋಟೆಕಾರ್ ಪಪಂ ಚುನಾವಣೆ; ಡಿ.25ರಿಂದ ಮದ್ಯ ಮಾರಾಟ, ಸಾಗಾಟ ನಿಷೇಧ
Update: 2021-12-23 22:26 IST
ಮಂಗಳೂರು, ಡಿ.23: ವಿಟ್ಲ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್‌ಗೆ ಡಿ.27ರಂದು ಚುನಾವಣೆ ನಡೆಯಲಿರುವುದರಿಂದ ಮುಕ್ತ, ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತ, ಶಾಂತಿಯುತ ಮತದಾನ ನಡೆಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಡಿ.25ರ ಸಂಜೆ 5 ರಿಂದ ಡಿ.27ರ ಸಂಜೆ 5 ಗಂಟೆಯವರೆಗೆ ವಿಟ್ಲ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.