ವಿಟ್ಲ ಪ.ಪಂ. ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ: ಮಂಜುನಾಥ ಭಂಡಾರಿ
ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಪ್ರಯುಕ್ತ ಈಗಾಗಲೇ ಬಿಡುಗಡೆಯಾಗಿರುವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಪ್ರಜೆಗಳ ಪ್ರಣಾಳಿಕೆಯಾಗಿದೆ. ಇದನ್ನು ಜಾರಿಗೊಳಿಸಲು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಅವರನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕರೆ ನೀಡಿದರು.
ಅವರು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜೆಗಳೇ ತಯಾರಿಸಿದ ಪ್ರಣಾಳಿಕೆ ಇದು. ವಿನೂತನ ಕಾರ್ಯವಾಗಿದೆ. ಪ್ರಣಾಳಿಕೆಯಲ್ಲಿರುವ ಎಲ್ಲಾ ಅಂಶಗಳನ್ನು ನಡೆಸಿಕೊಡಲು ಪಕ್ಷ ಬದ್ಧವಾಗಿದೆ ಎಂದರು.
ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ 400 ಕೆ.ವಿ. ಹೈ ಟೆನ್ಷನ್ ವಿದ್ಯುತ್ ಸರಬರಾಜು ಕಾಮಗಾರಿ ವಿರೋಧಿಸಿ ರೈತರು, ಸಾರ್ವಜನಿಕರು ಪಟ್ಟಣ ಪಂಚಾಯತ್ ಚುನಾವಣಾ ಬಹಿಷ್ಕಾರಿದ ಬ್ಯಾನರ್ ಅಳವಡಿಸಿದ್ದರು. ಅವರ ಮನೆಗೆ ತೆರಳಿ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ಮಾಡಿದ್ದೇವೆ. ಜನ ತುಂಬಾ ಉತ್ತಮ ರೀತಿಯಲ್ಲಿ ಬೆಂಬಲ ನೀಡುತ್ತಿದ್ದಾರೆ ಎಂದರು. ಈ ಯೋಜನೆಯನ್ನು ನಾವು ಪ್ರಬಲವಾಗಿ ವಿರೋಧಿಸಲಿದ್ದೇವೆ ಎಂದರು.
ಇದೇ ವೇಳೆ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರನ್ನು ಅಭಿನಂದಿಸಲಾಯಿತು.
ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ವಿ., ಚುನಾವಣಾ ಉಸ್ತುವಾರಿಗಳಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು ಎಂ.ಎಸ್ ಮಹಮ್ಮದ್, ಚಂದ್ರಹಾಸ ಕರ್ಕೇರ, ಕಾಂಗ್ರೆಸ್ ಸೇವಾದಳದ ಜಿಲ್ಲಾ ಮುಖ್ಯ ಸಂಘಟಕ ಜೋಕಿಂ ಡಿ'ಸೋಜ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮಂಜುಳಾ ಪಕ್ಕಳ, ಕೆಪಿಸಿಸಿ ಸಂಯೋಜಕ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪಕ್ಷ ಪ್ರಮುಖರಾದ ಉಮಾನಾಥ ಶೆಟ್ಟಿ, ವಿ.ಎ.ರಶೀದ್ ವಿಟ್ಲ, ರಮಾನಾಥ ವಿಟ್ಲ, ಇಕ್ಬಾಲ್ ಹೋನೆಸ್ಟ್, ಸಿದ್ದೀಕ್ ಸರವು, ಕರೀಂ ಕುದ್ದುಪದವು, ಶೇಖ್ ಅಲಿ ಸೇರಾಜೆ ಮೊದಲಾದವರು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.