×
Ad

ಅಫಜಲಪುರದಲ್ಲಿ ಕುರಾನ್ ದಹನ ಪ್ರಕರಣ: ವಿಧಾನಸಭೆಯಲ್ಲಿ ಪ್ರಸ್ತಾಪ

Update: 2021-12-24 18:22 IST

ಬೆಳಗಾವಿ, ಡಿ. 24: ಕಲಬುರಗಿ ಜಿಲ್ಲೆ ಅಫ್ಜಲಪುರ ಮಸೀದಿಯಲ್ಲಿ ಕಿಡಿಗೇಡಿಗಳು ಪವಿತ್ರ ಕುರಾನ್ ದಹಿಸಿ ದಾಂಧಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಸದಸ್ಯ ಎಂ.ವೈ.ಪಾಟೀಲ್ ಆಗ್ರಹಿಸಿದ್ದಾರೆ.

ಶುಕ್ರವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಅಫಜಲಪುರದ ಮಸೀದಿಗೆ ನುಗ್ಗಿದ ಕೆಲ ಕಿಡಿಗೇಡಿಗಳು ಮುಸ್ಲಿಮರ ಪವಿತ್ರ ಗ್ರಂಥ ಕುರಾನ್ ಸುಟ್ಟು ಹಾಕಿದ್ದಾರೆ. ಅಲ್ಲದೆ, ಪ್ರಾರ್ಥನಾ ಮಂದಿರದಲ್ಲಿ ದಾಂಧಲೆ ನಡೆಸಿದ್ದಾರೆ. ಈ ಘಟನೆ ಹಿಂದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ, ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಸರಕಾರದ ಪರವಾಗಿ ಉತ್ತರ ನೀಡಿದ ಸಚಿವ ಗೋವಿಂದ ಕಾರಜೋಳ, ಈ ಸಂಬಂಧ ಕೂಲಂಕಷ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News