×
Ad

ಉಡುಪಿ: ಶುಕ್ರವಾರ 13 ಮಂದಿಗೆ ಕೊರೋನ ಸೋಂಕು ದೃಢ

Update: 2021-12-24 19:01 IST
ಸಾಂದರ್ಭಿಕ ಚಿತ್ರ (PTI)

ಉಡುಪಿ: ಜಿಲ್ಲೆಯಲ್ಲಿ 20 ದಿನಗಳ ಬಳಿಕ ಕೋವಿಡ್-19 ಸೋಂಕಿತರ ಸಂಖ್ಯೆ ಎರಡಂಕಿಗೇರಿದೆ. ಶುಕ್ರವಾರ ಒಟ್ಟು 13 ಮಂದಿ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ನಾಲ್ವರು ಸೋಂಕು ಮುಕ್ತರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 37ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 13 ಮಂದಿಯಲ್ಲಿ 10 ಮಂದಿ ಪುರುಷರು ಹಾಗೂ ಮೂವರು ಮಹಿಳೆಯರು. ಇವರೆಲ್ಲಿ 12 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ ಒಬ್ಬರು ಕುಂದಾಪುರದವರು. ಒಬ್ಬರಿಗೆ ಆಸ್ಪತ್ರೆ ಹಾಗೂ ಉಳಿದ 12 ಮಂದಿಯನ್ನು ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.

ಗುರುವಾರ ನಾಲ್ವರು ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,493ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4520 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,008ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4520 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,008ಕ್ಕೇರಿದೆ.

4237 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 4,237 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 688 ಮಂದಿ ಮೊದಲ ಡೋಸ್ ಹಾಗೂ 3549 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 374 ಮಂದಿ ಮೊದಲ ಡೋಸ್ ಹಾಗೂ 2268 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 314 ಮಂದಿ ಮೊದಲ ಡೋಸ್ ಹಾಗೂ 1280 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇವರೊಂದಿಗೆ ಒಬ್ಬ ಆರೋಗ್ಯ ಕಾರ್ಯಕರ್ತರು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News