×
Ad

ಮೆಟ್ರೋ ರೈಲು ಮಾರ್ಗ: 577 ಮರ ತೆರವಿಗೆ ಹೈಕೋರ್ಟ್ ಅನುಮತಿ

Update: 2021-12-24 19:35 IST

ಬೆಂಗಳೂರು, ಡಿ.24: ನಾಗಾವರ-ಗೊಟ್ಟಿಗೆರೆ ಮೆಟ್ರೊ ರೈಲು ಮಾರ್ಗ ನಿರ್ಮಾಣಕ್ಕೆ ಅಡ್ಡಿಯಾಗಿದ್ದ 577 ಮರಗಳನ್ನು ಕತ್ತರಿಸಲು ಹೈಕೋರ್ಟ್, ಬಿಎಂಆರ್‍ಸಿಎಲ್‍ಗೆ ಅನುಮತಿ ನೀಡಿದೆ.

ಮರಗಳನ್ನು ಕಡಿಯುವುದಕ್ಕೆ ಆಕ್ಷೇಪಿಸಿ ಬೆಂಗಳೂರು ಎನ್ವಿರಾನ್‍ಮೆಂಟ್ ಟ್ರಸ್ಟ್ ಮತ್ತು ಪರಿಸರವಾದಿ ಟಿ.ದತ್ತಾತ್ರೇಯ ದೇವರು ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ತಜ್ಞರ ಸಮಿತಿ ವರದಿಯಂತೆ 577 ಮರಗಳನ್ನು ಕತ್ತರಿಸಬಹುದಾಗಿದೆ. ಜೊತೆಗೆ 18 ಮರಗಳನ್ನು ಸ್ಥಳಾಂತರ ಮಾಡಬೇಕು. ಇನ್ನು ಕತ್ತರಿಸುವ ಮರಗಳಿಗೆ ಪರ್ಯಾಯವಾಗಿ ಗಿಡಗಳನ್ನು ನೆಡಬೇಕು ಎಂದು ಆದೇಶಿಸಿತು.
ನಾಗಾವರ-ಗೊಟ್ಟಿಗೆರೆ ಮೆಟ್ರೊ ಮಾರ್ಗದಲ್ಲಿ ಮರಗಳನ್ನು ಕತ್ತರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರ್ಜಿದಾರರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. 

ಕರ್ನಾಟಕ ಮರ ಸಂರಕ್ಷಣಾ ಕಾಯಿದೆ 1976 ಮತ್ತು ಕರ್ನಾಟಕ ಮರ ಸಂರಕ್ಷಣಾ ನಿಯಮ 1977ಕ್ಕೆ ವಿರುದ್ಧವಾಗಿ ಮರಗಳನ್ನು ಕತ್ತರಿಸಲಾಗುತ್ತಿದೆ. ಇದು ನಿಯಮಬಾಹಿರ ಕ್ರಮ. ಮರ ಪ್ರಾಧಿಕಾರದ ಕಾರ್ಯವೈಖರಿಯ ಮೇಲೆ ನಿಗಾವಹಿಸಲು ಕಾರ್ಯಪಡೆ ರಚಿಸಬೇಕೆಂದು ಕೋರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News