ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Update: 2021-12-24 19:41 IST
ಉಡುಪಿ, ಡಿ.24: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಮತ್ತು 23 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಧನದ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.