×
Ad

ದ.ಕ. ಜಿಲ್ಲಯಲ್ಲಿ ಶುಕ್ರವಾರ 20 ಮಂದಿಗೆ ಕೋವಿಡ್ ಸೋಂಕು ದೃಢ

Update: 2021-12-24 21:32 IST

ಮಂಗಳೂರು, ಡಿ. 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 20 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದು, 14 ಮಂದಿ ಸೋಂಕು ಮುಕ್ತರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಜಿಲ್ಲೆಯಲ್ಲಿ ಸದ್ಯ166 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.28 ಆಗಿದೆ. ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1,16,267 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1,14,401 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1700 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 91,354 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,10,29,670 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News