×
Ad

ಬಿಹಾರ: ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ,ಆರು ಮಂದಿ ಮೃತ್ಯು

Update: 2021-12-26 14:01 IST
ಸಾಂದರ್ಭಿಕ ಚಿತ್ರ

ಪಾಟ್ನಾ: ಬಿಹಾರದ ಮುಝಾಫರ್‌ಪುರದ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ.

 ಘಟನೆಯನ್ನು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಖಚಿತಪಡಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ನೂಡಲ್ಸ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವಣ್ ಕುಮಾರ್ ತಿಳಿಸಿದ್ದಾರೆ.

ಒಂದು ಕಿಲೋಮೀಟರ್ ದೂರದ ತನಕದ  ಪ್ರದೇಶಗಳಲ್ಲಿನ ನಿವಾಸಿಗಳಿಗೆ ದೊಡ್ಡ ಸ್ಫೋಟದ ಸದ್ದು ಕೇಳಿಸಿತ್ತು. ಏನಾಯಿತು ಎಂಬುದನ್ನು ಪರಿಶೀಲಿಸಲು ನೂರಾರು ಜನರು ಘಟನೆಯ ಸ್ಥಳಕ್ಕೆ ಧಾವಿಸುತ್ತಿರುವ ದೃಶ್ಯಗಳು  ಕಂಡುಬಂದಿವೆ.

ರಕ್ಷಣಾ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News