ಸಿದ್ದರಾಮಯ್ಯ ಮತ್ತೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

Update: 2021-12-26 14:17 GMT

ಬೆಂಗಳೂರು: ಮತ್ತೊಮ್ಮೆ ಸಿದ್ದರಾಮಯ್ಯ ಅವರು ನಾಡಿನ ಮುಖ್ಯಮಂತ್ರಿ ಆಗುವ ಅವಶ್ಯಕತೆ ಇದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. 

ರವಿವಾರ ನಗರದ ಗಾಂಧಿ ಭವನದಲ್ಲಿ ಬಹುರೂಪಿ ಹಾಗೂ ಲಂಡನ್‍ನ ಬಸವ ಅಂತರ್‍ರಾಷ್ಟ್ರೀಯ ಪ್ರತಿಷ್ಠಾನ ಆಯೋಜಿಸಿದ್ದ ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮಕಥನ ಬಿಡುಗಡೆ ಹಾಗೂ ಡಾ.ಎಂ.ಎಂ.ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ  ಒಂದು ವಿವಾದವಾಗಿ ನನಗೆ ಗೊತ್ತಿಲ್ಲದ ಸಮುದಾಯಗಳೆಲ್ಲ ಬೆಂಬಲ ನೀಡಿದವು. ಹೀಗೆಲ್ಲಾ ಆಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನನ್ನ ಬೆಂಬಲಕ್ಕೆ ನಿಂತವರು ಎಸ್.ಜಿ. ಸಿದ್ದರಾಮಯ್ಯ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. 

'ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನನ್ನ ದೇಸಿ ಶಾಲೆಗೆ ಸಹಾಯ ಮಾಡಿದ್ದರು. ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ಧರ್ಮೋಕ್ರಸಿಯನ್ನು ಪಕ್ಕಕ್ಕೆ ಸರಿಸಿ, ಡೆಮೊಕ್ರಸಿ ತರಲಿ' ಎಂದು ಹೇಳಿದರು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News