×
Ad

ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಅಧಿಕಾರ ವಿಕೇಂದ್ರೀಕರಣದ ಸಂಕೇತವಾಗಿದೆ :ಮಂಜುನಾಥ್ ಭಂಡಾರಿ

Update: 2021-12-26 19:25 IST

ಕಾರ್ಕಳ: ಗ್ರಾಮ ಸ್ವರಾಜ್ಯದ ಪರಿಕಲ್ಪನೆ  ಅಧಿಕಾರ ವಿಕೇಂದ್ರೀಕರಣದ ಸಂಕೇತವಾಗಿದೆ. ಈ ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ಇಂದು ಗ್ರಾಮ ಪಂಚಾಯತುಗಳು ಪ್ರಜಾಪ್ರಜಾತಂತ್ರ ಆಡಳಿತ ವ್ಯವಸ್ಥೆಯ ಶಕ್ತಿ ಕೇಂದ್ರಗಳಾಗಿವೆ. ಇಲ್ಲಿ  ಗೆಲುವು ಸಾಧಿಸದೆ  ವಿಧಾನ ಸಭೆ, ಲೋಕ ಸಭೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಅವರು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿಯಲ್ಲಿ ನಡೆದ ಗ್ರಾಮ ಪಂಚಾಯತು ಸದಸ್ಯರು ಹಾಗೂ ಪಕ್ಷದ ಕಾರ್ಯರೊಡನೆ ಸಂವಾದ ಕಾರ್ಯಕ್ರಮದಲ್ಲಿ ಮಾತಾಡುತ್ತಿದ್ದರು.

ಪಕ್ಷ ಸಂಘಟನೆ ಇಂದಿನ ಆಧ್ಯತೆಯಾಗಿದೆ. ಜಿಪಂ, ತಾಪಂ ಚುನಾವಣೆಗೆ ಇಂದಿನಿಂದಲೇ ಅಣಿಯಾಗಬೇಕು. ಹಿರಿಯರ ಮಾರ್ಗದರ್ಶನದಲ್ಲಿ ಸಾಮೂಹಿಕ ನಾಯಕತ್ವದಡಿಯಲ್ಲಿ ಚುನಾವಣೆಗಳನ್ನು ಎದುರಿಸಬೇಕು ಎಂದು ಕರೆ ನೀಡಿದರು.

ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್,ಪ್ರಾಧಾನ ಕಾರ್ಯದರ್ಶಿ ಜೋಜ್೯ ಕ್ಯಾಸ್ತಲೀನೂ, ಬೈಲೂರು ಗ್ರಾಮ ಪಂಚಾಯತ್ ಸದಸ್ಯ ಹೈದರಾಲಿ  ಕ್ಷೇತ್ರದ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು. ಜಿಲ್ಲಾ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪ್ರಸ್ತಾವನೆ ಗೈದು ಸ್ವಾಗತಿಸಿದರು.

ಡಿಸಿಸಿ ಉಪಾದ್ಯಕ್ಷ ಸುಧಾಕರ ಕೊಟ್ಯಾನ್, ಕಿಸಾನ್ ಘಟಕ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಕೆಪಿಸಿಸಿ ಕನ್ವಿನಯರ್ ಕೃಷ್ಣ ಮೂರ್ತಿ, ಪ್ರಭಾಕರ ಬಂಗೇರ, ಸುಶಾಂತ್ ಸುಧಾಕರ್, ನಗರಾಧ್ಯಕ್ಷ ಮಧುರಾಜ್ ಶೆಟ್ಟಿ, ನಗರಾಧ್ಯಕ್ಷೆ ಕಾಂತಿ ಶೆಟ್ಟಿ, ದಯಾನಂದ ಬಂಗೇರ, ಥೋಮಸ್ ಮಸ್ಕರೇನಸ್, ಎಸ್ಸಿ ಘಟಕಾಧ್ಯಕ್ಷ ಅಣ್ಣಪ್ಪ ನಕ್ರೆ, ನವೀನ್ ದೇವಾಡಿಗ, ಪುರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News