×
Ad

ಚುಸಾಪ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Update: 2021-12-26 19:39 IST

ಮಂಗಳೂರು, ಡಿ.26: ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ತುಳು ಸಾಹಿತ್ಯ ಅಕಾಡಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜ.30ರಂದು ನಗರದ ತುಳು ಭವನದ ಸಿರಿ ಚಾವಡಿಯಲ್ಲಿ ಜರಗುವ ದ.ಕ. ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಾಹಿತ್ಯ ಪೋಷಕ, ಸಂಘಟಕ ಗುರುಪ್ರಸಾದ್ ಕಡಂಬಾರ್ ಲಾಂಛನವನ್ನು ಬಿಡುಗಡೆಗೊಳಿಸಿದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ಕವಿ ರಘು ಇಡ್ಕಿದು, ಪತ್ರಕರ್ತ ರಾಜೇಶ್ ಶೆಟ್ಟಿ ದೋಟ, ಪ್ರೊ.ಪಿ.ಕೃಷ್ಣಮೂರ್ತಿ, ಲೇಖಕ ಜಯಪ್ರಕಾಶ್ ಪುತ್ತೂರು, ಅಪರಾಧ ಮತ್ತು ಸಂಚಾರ ಪೊಲೀಸ್ ಉಪ ಆಯುಕ್ತ ಬಿ.ಪಿ.ದಿನೇಶ್ ಕುಮಾರ್, ಮಂಗಳೂರು ಚುಸಾಪ ಕಾರ್ಯದರ್ಶಿ ವಿಜಯಲಕ್ಷ್ಮಿ ಕಟೀಲು, ಉಪಾಧ್ಯಕ್ಷೆ ಅರುಣಾ ನಾಗರಾಜ್, ಲತೀಶ್ ಸಂಕೊಳಿಗೆ, ಜತೆ ಕಾರ್ಯದರ್ಶಿ ವೆಂಕಟೇಶ್ ಗಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News