ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್: ಕೆ.ಎಲ್.ರಾಹುಲ್ ಆಕರ್ಷಕ ಶತಕ

Update: 2021-12-26 14:40 GMT
ರಾಹುಲ್-ಮಯಾಂಕ್, Photo: AFP

ಕೇಪ್‌ಟೌನ್, ಡಿ.26: ದಕ್ಷಿಣ ಆಫ್ರಿಕಾ ವಿರುದ್ಧ ರವಿವಾರ ಇಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತದ ಆರಂಭಿಕ ಬ್ಯಾಟರ್ ಕೆ.ಎಲ್.ರಾಹುಲ್ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದರು.
  
ಮಯಾಂಕ್ ಅಗರ್ವಾಲ್(60,123 ಎಸೆತ)ಅವರೊಂದಿಗೆ ಇನಿಂಗ್ಸ್ ಆರಂಭಿಸಿದ ರಾಹುಲ್ ಮೊದಲ ವಿಕೆಟ್ ಜೊತೆಯಾಟದಲ್ಲಿ 117 ರನ್ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರು. 77.5ನೇ ಓವರ್‌ನಲ್ಲಿ ಸ್ಪಿನ್ನರ್ ಕೇಶವ ಮಹಾರಾಜ್ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕವನ್ನು ಪೂರೈಸಿದರು. 218 ಎಸೆತಗಳನ್ನು ಎದುರಿಸಿದ ರಾಹುಲ್ 14 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 7ನೇ ಟೆಸ್ಟ್ ಶತಕವನ್ನು ಪೂರೈಸಿದರು.

ಭಾರತವು 79ನೇ ಓವರ್ ಅಂತ್ಯಕ್ಕೆ 3 ವಿಕೆಟ್‌ಗಳ ನಷ್ಟಕ್ಕೆ 244 ರನ್ ಗಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News