ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2021-12-26 22:12 IST
ಕಾರ್ಕಳ, ಡಿ.26: ಮಾನಸಿಕ ಕಾಯಿಲೆಯಿಂದ ಜೀವನದಲ್ಲಿ ನೊಂದು ಡಿ.18ರಂದು ಮಲ್ಲಿಗೆ ಗಿಡಕ್ಕೆ ಹಾಕುವ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸೂಡ ಗ್ರಾಮದ ಕುದ್ರೆಬೆಟ್ಟುವಿನ ಲಾರೆನ್ಸ್ ಪಿರೇರಾ ಎಂಬವರ ಮಗ ಜೋನ್ಸನ್ ಪಿರೇರಾ(23) ಎಂಬವರು ಡಿ.25ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿ ಯಾಗದೇ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಅನಾರೋಗ್ಯದಿಂದ ಬಳಲುತ್ತಿದ್ದ ಶೇಡಿಗುಡ್ಡೆಯ ಗಿರಿಜಾ ಶೆಡ್ತಿ(75) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.25ರಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.