ಎನ್‍ಇಪಿ ಅಳವಡಿಸಿಕೊಂಡ ದೇಶದ ಮೊದಲ ರಾಜ್ಯವೆಂಬ ಹೆಗ್ಗಳಿಕೆ ಕರ್ನಾಟಕದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2021-12-26 16:45 GMT

ಬೆಂಗಳೂರು, ಡಿ.26: ದೇಶದ ಭವಿಷ್ಯ ದಿಕ್ಸೂಚಿ ಆಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯವು ಅಳವಡಿಸಿಕೊಂಡಿದ್ದು, ಕರ್ನಾಟಕವು ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.   

ರವಿವಾರ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ ಜನಸೇವಾ ವಿಶ್ವಸ್ಥ ಮಂಡಳಿಯು ಆಯೋಜಿಸಿರುವ ಪೂರ್ಣ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿಯು ಪ್ರಾಚೀನ ಹಾಗೂ ಆಧುನಿಕ ಶಿಕ್ಷಣದ ಮಿಶ್ರಣವಾಗಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿ ತರಲಿದೆ. ಸರಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸುವ ಮೂಲಕ ಶಿಕ್ಷಣಕ್ಕೆ ಹೊಸ ರೂಪ ನೀಡಿದೆ. ಇದರಿಂದ ನಾಗರಿಕತೆಯ ನಿರ್ಮಾಣವಾಗುತ್ತದೆ. ಗುಣಮಟ್ಟದ ಶಿಕ್ಷಣ ನೀಡಲು ತಂತ್ರಜ್ಞಾನ ಅವಶ್ಯಕತೆ ಇದೆ. ಶಾಲೆ ಕಟ್ಟಡದ ಹೊರಗಡೆಯೂ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

ಸುತ್ತೂರು ಶ್ರೀಗಳು ಮಾತನಾಡಿ, ಪ್ರಸ್ತುತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕøತಿ ಕಲಿಸುವುದು ಅತ್ಯಗತ್ಯವಾಗಿದೆ. ಭಾರತೀಯ ಸಂಸ್ಕøತಿ ಜಗತ್ತಿನಲ್ಲೇ ಶೇಷ್ಠ ಸಂಸ್ಕೃತಿಯಾಗಿದ್ದು, ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣದ ಜೊತೆಗೆ ಯುವಕರಲ್ಲಿ ಭಾರತೀಯ ಸಂಸ್ಕøತಿಯನ್ನು ಬಿತ್ತುತ್ತಿವೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಮೈಸೂರಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ಸೋಮಣ್ಣ, ಸಹಕಾರ ಸಚಿವ ಸೋಮಶೇಖರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News