ಹಾಜಿ ಪಿ. ಇಬ್ರಾಹಿಂ ಬಂಟ್ವಾಳ

Update: 2021-12-26 17:24 GMT

ಬಂಟ್ವಾಳ : ಇಲ್ಲಿನ ಕೆಳಗಿನ ಪೇಟೆ ನಿವಾಸಿ ಹಾಜಿ ಪಿ. ಇಬ್ರಾಹಿಂ ಬಂಟ್ವಾಳ (78) ಶನಿವಾರ ರಾತ್ರಿ ಅಲ್ಪಕಾಲದ ಅನಾರೋಗ್ಯ ದಿಂದ ಸ್ವಗೃಹದಲ್ಲಿ ನಿಧನರಾದರು.

ಬಂಟ್ವಾಳ ಜುಮಾ ಮಸೀದಿ ಆಡಳಿತ ಸಮಿತಿ ಕಾರ್ಯದರ್ಶಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿರುವ ಇವರು ತೌಹೀದ್ ಅಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸದಸ್ಯರಾಗಿ, ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಮೃತರು ಮಂಗಳೂರು ಗಣೇಶ್ ಬೀಡಿ ಕಂಪೆನಿಯಲ್ಲಿ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತಿ ಹೊಂದಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ