ಹೆಬ್ರಿ: ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು; ಚಾಲಕ ಸ್ಥಳದಲ್ಲೇ ಮೃತ್ಯು

Update: 2021-12-26 17:47 GMT

ಹೆಬ್ರಿ: ಕಾರೊಂದು ಹಿಮ್ಮುಖವಾಗಿ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಎದುರಿನ ಮನೆಗೆ ನುಗ್ಗಿದ ಪರಿಣಾಮ ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಗಾಂಧಿನಗರ ಎಂಬಲ್ಲಿ ರವಿವಾರ ಸಂಜೆಯ ಸುಮಾರಿಗೆ ನಡೆದಿದೆ. 

ಮೃತ ಕಾರು ಚಾಲಕನನ್ನು ಗಾಂಧಿನಗರ ನಿವಾಸಿ ವಸಂತ (52) ಎಂದು ಗುರುತಿಸಲಾಗಿದೆ.

ವಸಂತ ಅವರು ತನ್ನ ಮನೆಯಿಂದ ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಎದುರುಗಡೆ ಇರುವ ಮನೆಗೆ ಹಿಮ್ಮುಖವಾಗಿ ಕಾರು ನುಗ್ಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರು ನುಗ್ಗಿದ ರಭಸಕ್ಕೆ ಮನೆಯ ಗೋಡೆ ಕುಸಿತಗೊಂಡಿದ್ದು, ಅಪಾರ ಹಾನಿ ಸಂಭವಿಸಿದೆ.

ಮನೆಯೊಳಗಿದ್ದ ಜನರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಲ್ಲದೆ, ಕಾರು ನುಗ್ಗಿದ ಜಾಗದಲ್ಲಿ ಮಗು ಇತ್ತು. ಘಟನೆ ನಡೆಯುವ ಸ್ವಲ್ಪ ಮೊದಲು ಮಗು ಸಹಿತ ಮನೆಯವರು ಹೊರಗೆ ಓಡಿ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿ.ಎಂ. ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News