×
Ad

ವಿರಾಜಪೇಟೆ: ಹಾಲು ಸಾಗಾಟದ ವಾಹನ ಪಲ್ಟಿ; ಚಾಲಕ ಮೃತ್ಯು, ಇನ್ನಿಬ್ಬರು ಗಂಭೀರ

Update: 2021-12-27 10:34 IST

ಹುಣಸೂರು, ಡಿ.27: ಹಾಲು ಸಾಗಾಟದ ವಾಹನವೊಂದು ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆ ವಿರಾಜಪೇಟೆ ಸಮೀಪದ ಐಮಂಗಲ ಗ್ರಾಮದ ಬಳಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರನ್ನು (34) ಹುಣಸೂರು ತಾಲೂಕಿನ ಮರೂರು ಗ್ರಾಮದ ನಿವಾಸಿ ಅಜಯ್ (34) ಎಂದು ಗುರುತಿಸಲಾಗಿದೆ.

ಎಂದಿನಂತೆ ಶನಿವಾರ ರಾತ್ರಿಯೂ ಅಜಯ್ ವ್ಯಾನ್ ನಲ್ಲಿ ಹಾಲು ವಿತರಣೆಗೆ ತೆರಳಿದ್ದರು. ಮುಂಜಾನೆ 4 ಗಂಟೆ ಸುಮಾರಿಗೆ ಐಮಂಗಲ ಗ್ರಾಮದ ಬಳಿ ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಹಾಲು ಸಾಗಾಟದ ವ್ಯಾನ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿಗೆ ಉರುಳಿಬಿತ್ತೆನ್ನಲಾಗಿದೆ.

ಈ ವೇಳೆ ಗಂಭೀರ ಗಾಯಗೊಂಡಿದ್ದ ಅಜಯ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News