×
Ad

ಬಿಡದಿ‌ ಪುರಸಭೆ ಚುನಾವಣೆ: ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರ ನಡುವೆ ಹೊಡೆದಾಟ

Update: 2021-12-27 10:54 IST

ರಾಮನಗರ, ಡಿ.27: ರಾಮನಗರ ಜಿಲ್ಲೆಯ ಬಿಡದಿ ಪುರಸಭೆ ಚುನಾವಣೆಯ ವೇಳೆ ವಾರ್ಡ್ 1ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ, ಹೂಯ್ ಕೈ ನಡೆದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮತ ಯಾಚನೆ ವಿಚಾರವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮೊದಲು ವಾಗ್ವಾದ ನಡದಿದೆ. ಈ ವಿಚಾರ ದೊಡ್ಡದಾಗಿ ಪರಸ್ಪರ ಕೈಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿದ್ದಾರೆ. ಪರಸ್ಪರ ಹೊಡೆದಾಟದಿಂದಾಗಿ ಹಲವು ಮಂದಿ ಗಾಯಗೊಂಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಎರಡು ಪಕ್ಷಗಳ ಕಾರ್ಯಕರ್ತರನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News