×
Ad

ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

Update: 2021-12-27 20:14 IST

ಬೆಂಗಳೂರು: ಜನಾಕ್ರೋಶಕ್ಕೆ ಮಣಿಯದೆ ರಾಜ್ಯ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರೆಸ್ಸೆಸ್‌ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರೆಸ್ಸೆಸ್‌ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.

2015ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News