ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಲಸಿಕೆ ನೀಡಿಕೆ ವೇಗಗೊಳಿಸಿ: ಕೇಂದ್ರಕ್ಕೆ ಚುನಾವಣಾ ಆಯೋಗದ ಸೂಚನೆ

Update: 2021-12-27 15:07 GMT
ಸಾಂದರ್ಭಿಕ ಚಿತ್ರ:PTI

ಹೊಸದಿಲ್ಲಿ,ಡಿ.27: ಚುನಾವಣೆಗಳು ನಡೆಯಲಿರುವ ರಾಜ್ಯಗಳಲ್ಲಿ ಕೋವಿಡ್ ಲಸಿಕೆ ನೀಡಿಕೆಯನ್ನು ತ್ವರಿತಗೊಳಿಸುವಂತೆ ಚುನಾವಣಾ ಆಯೋಗವು ಕೇಂದ್ರಕ್ಕೆ ಸೂಚಿಸಿದೆ. ಈ ರಾಜ್ಯಗಳಲ್ಲಿ ಪ್ರತಿಯೊಬ್ಬರೂ ಸಂಪೂರ್ಣವಾಗಿ ಲಸಿಕೆ ಪಡೆದುಕೊಂಡಿರುವುದನ್ನು ಖಚಿತ ಪಡಿಸಿಕೊಳ್ಳುವುದು ತನ್ನ ಗುರಿಯಾಗಿದೆ ಎಂದು ಅದು ಹೇಳಿದೆ.

ಮುಂದಿನ ವರ್ಷದ ಮೊದಲ ಮೂರು ತಿಂಗಳುಗಳಲ್ಲಿ ಗೋವಾ,‌ ಮಣಿಪುರ, ಉತ್ತರಖಂಡ, ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಉಲ್ಬಣ ಮತ್ತು ಒಮೈಕ್ರಾನ್ ರೂಪಾಂತರಿಯಿಂದ ಬೆದರಿಕೆಯ ನಡುವೆ ಈ ರಾಜ್ಯಗಳಲ್ಲಿ ಚುನಾವಣೆಗಳನ್ನು ಮತ್ತು ರ್ಯಾಲಿಗಳನ್ನು ನಡೆಸುವ ಬಗ್ಗೆ ಕಳವಳಗಳು ವ್ಯಕ್ತವಾಗಿವೆ.

ಸೋಮವಾರ ನಡೆದ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ ಭೂಷಣ ಅವರು ಚುನಾವಣೆ ನಡೆಯಲಿರುವ ಪ್ರತಿ ರಾಜ್ಯದಲ್ಲಿಯ ಲಸಿಕೀಕರಣ ದರದ ಬಗ್ಗೆ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿದರು. ಲಸಿಕೆಯ ಮೊದಲ ಡೋಸ್ ಪಡೆದುಕೊಂಡವರ ಸಂಖ್ಯೆ ಉತ್ತರಾಖಂಡ ಮತ್ತು ಗೋವಾದಲ್ಲಿ ಶೇ.100ಕ್ಕೆ ಸಮೀಪದಲ್ಲಿದ್ದರೆ,ಉತ್ತರ ಪ್ರದೇಶದಲ್ಲಿ ಸುಮಾರು ಶೇ.85ರಷ್ಟು ಹಾಗೂ ಮಣಿಪುರ ಮತ್ತು ಪಂಜಾಬಗಳಲ್ಲಿ ಸುಮಾರು ಶೇ.80ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News