ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಝೀರ್

Update: 2021-12-28 05:46 GMT

ಸುಬ್ರಹ್ಮಣ್ಯ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು.

ಸೋಮವಾರ ದೇವಸ್ಥಾನಕ್ಕೆ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ನ್ಯಾಯಮೂರ್ತಿ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು. ಅಬ್ದುಲ್ ನಝೀರ್ ಅವರು ಮಂಗಳವಾರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News