×
Ad

ಪಂಜಾಬ್‌ ಚುನಾವಣೆ ಹಿನ್ನೆಲೆ: ಮಾಜಿ ಕ್ರಿಕೆಟಿಗ ದಿನೇಶ್‌ ಮೋಂಗಿಯಾ ಸಹಿತ ಮೂವರು ಶಾಸಕರು ಬಿಜೆಪಿ ಸೇರ್ಪಡೆ

Update: 2021-12-28 16:10 IST
Photo: ANI

ಚಂಡೀಗಢ: ಮಾಜಿ ಭಾರತೀಯ ಕ್ರಿಕೆಟಿಗ ದಿನೇಶ್ ಮೊಂಗಿಯಾ ಇಂದು ದಿಲ್ಲಿಯ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. 44 ವರ್ಷದ ಮೊಂಗಿಯಾ ಅವರು ತಮ್ಮ ರಾಜಕೀಯ ಇನ್ನಿಂಗ್ಸ್ ಅನ್ನು ಪ್ರಾರಂಭಿಸಲು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದರು. ಪಂಜಾಬ್‌ ನಲ್ಲಿ ಕೆಲವು ತಿಂಗಳುಗಳಲ್ಲೇ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಭಾರತಕ್ಕಾಗಿ ಸೀಮಿತ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದ ಮಾಜಿ ಕ್ರಿಕೆಟಿಗ ಮೋಂಗಿಯಾ ಪಂಜಾಬ್ ನಿವಾಸಿಯಾಗಿದ್ದಾರೆ. ಪಂಜಾಬ್ ನ ಮೂವರು ಶಾಸಕರಾದ ಫತೇ ಜಂಗ್ ಬಾಜ್ವಾ, ಬಲ್ವಿಂದರ್ ಸಿಂಗ್ ಲಡ್ಡಿ ಮತ್ತು ರಾಣಾ ಗುರ್ಮೀತ್ ಸೋಧಿ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆಯುವ ಮೂಲಕ ಸಂಪೂರ್ಣ ಬಹುಮತವನ್ನು ಗಳಿಸಿತು ಮತ್ತು 10 ವರ್ಷಗಳ ನಂತರ ಶಿರೋಮಣಿ ಅಕಾಲಿದಳ-ಬಿಜೆಪಿ ಸರ್ಕಾರವನ್ನು ಹೊರದಬ್ಬಿತು.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿರೋಮಣಿ ಅಕಾಲಿದಳ 15 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಮೂರು ಸ್ಥಾನಗಳನ್ನು ಪಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News