ಕೋವಿಡ್ ಮಾರ್ಗಸೂಚಿಯಲ್ಲಿ ಪರಿಷ್ಕರಣೆ: ಹೊಟೇಲ್‍ಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧವಿಲ್ಲ

Update: 2021-12-28 12:33 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.28: ರಾಜ್ಯದಲ್ಲಿ ಕೋವಿಡ್-19 ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಕಾರ್ಯಕಾರಿ ಸಮಿತಿಯು ಡಿ.26ರಂದು ಹೊರಡಿಸಿರುವ ಆದೇಶದಲ್ಲಿ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜ.7ರವರೆಗೆ ಜಾರಿಗೊಳಿಸಲಾಗಿದೆ.

ಡಿ.30 ರಿಂದ ಜ.2ರವರೆಗೆ ರೆಸ್ಟೋರೆಂಟ್‍ಗಳು, ಹೊಟೇಲ್‍ಗಳು, ಪಬ್‍ಗಳು, ಕ್ಲಬ್‍ಗಳು ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಮಾತ್ರ ಕಾರ್ಯಾಚರಿಸಬೇಕು.

ಈ ಮೂಲಕ ಸ್ಪಷ್ಟಪಡಿಸುವುದೇನೆಂದರೆ, ಮೇಲ್ಕಂಡ ನಿಯಂತ್ರಣ ಕ್ರಮವು ಹೊಟೇಲ್‍ಗಳಲ್ಲಿ ಗ್ರಾಹಕರಿಗೆ ಆಹಾರ ಮತ್ತು ಪಾನೀಯಗಳನ್ನು ಬಡಿಸುವಂತಹ ಸ್ಥಳಗಳಿಗೆ ಮಾತ್ರ ಅನ್ವಯಿಸುತ್ತದೆ. ಹೊಟೇಲ್‍ಗಳ ಕೊಠಡಿಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

ಹೊಟೇಲ್‍ಗಳು ಅನುಮೋದಿತ ಸಾಮರ್ಥ್ಯಕ್ಕೆ ಅನುಗುಣವಾಗಿ ಕೊಠಡಿಗಳಲ್ಲಿ ಆತಿಥ್ಯವನ್ನು ಕಲ್ಪಿಸಬಹುದು ಎಂದು ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News