ಬೆಂಗಳೂರು: ನೈಟ್ ಕರ್ಫ್ಯೂ ಉಲ್ಲಂಘಿಸಿದರೆ ಕಾನೂನು ಕ್ರಮ; ಪೊಲೀಸ್ ಆಯುಕ್ತ ಕಮಲ್ ಪಂತ್

Update: 2021-12-28 12:44 GMT

ಬೆಂಗಳೂರು, ಡಿ.28: ಕರ್ಫ್ಯೂ ಮೊದಲ ದಿವಸವಾಗಿದ್ದರಿಂದ ಸಾರ್ವಜನಿಕರಿಗೆ ಇಂದು ಅರಿವು ಮೂಡಿಸಲಾಗುವುದು. ಡಿ.29ರಿಂದ ನೈಟ್ ಕರ್ಫ್ಯೂ ಉಲ್ಲಂಘಿಸಿ ಸುಖಾಸುಮ್ಮನೆ ಓಡಾಡುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆ, ಜಂಕ್ಷನ್ ಸೇರಿದಂತೆ ಹಲವು ಕಡೆಗಳಲ್ಲಿ ನಾಕಾಬಂದಿ ಹಾಕಿ ಆಯಾಯ ಠಾಣೆಯ ಪೊಲೀಸರು ತಪಾಸಣೆ ಮಾಡಲಿದ್ದಾರೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುವುದು. ರಾತ್ರಿ 10 ಗಂಟೆ ಬಳಿಕ ಯಾವುದೇ ವ್ಯವಹಾರಗಳಿಗೂ ಅವಕಾಶವಿಲ್ಲ ಎಂದರು.

ಬಾರ್ ಅಂಡ್ ರೆಸ್ಟೋರೆಂಟ್‍ಗಳು 10 ಗಂಟೆ ಬಳಿಕ ತೆರೆದಿದ್ದರೆ ಮಾಲಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಅನವಶ್ಯಕವಾಗಿ ಓಡಾಡುವವರನ್ನು ವಿಚಾರಣೆ ಮಾಡಿ ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.

ಅನುಮತಿ ಇಲ್ಲದೆ ಹಾಗೂ ಅನವಶ್ಯಕವಾಗಿ ಸುಮ್ಮನೆ ಓಡಾಡುವುದಕ್ಕೆ ಅವಕಾಶ ಕೊಡಲ್ಲ. ರಸ್ತೆಯಲ್ಲಿ ನಿಂತು ಸಂಭ್ರಮಾಚರಣೆಗೂ ಅವಕಾಶ ಇಲ್ಲ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News