×
Ad

ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ: 81 ವಿದ್ಯಾರ್ಥಿಗಳು ಅಸ್ವಸ್ಥ

Update: 2021-12-28 19:32 IST
ಸಾಂದರ್ಭಿಕ ಚಿತ್ರ

ಹಾವೇರಿ, ಡಿ.28: ಮಧ್ಯಾಹ್ನದ ಬಿಸಿಯೂಟ ಸೇವಿಸಿ 81 ಮಕ್ಕಳು ಅಸ್ವಸ್ಥರಾದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 

ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ವಾಂತಿ ಭೇದಿಯಿಂದ 81 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳಿಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಸ್ವಸ್ಥಗೊಂಡ ಮಕ್ಕಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಕ್ಕಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಡಿಡಿಪಿಐ ಅಂದಾನಪ್ಪ ವಡಗೇರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲಾ ಬಾಲಕನೊಬ್ಬನ ತಟ್ಟೆಗೆ ಬಡಿಸಿದ ಊಟದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಬಳಿಕ, ಬಾಲಕನಿಗೆ ವಾಂತಿ ಕಾಣಿಸಿಕೊಂಡಿತ್ತು. ಒಬ್ಬ ಬಾಲಕನಿಗೆ ವಾಂತಿ ಆಗುತ್ತಿದ್ದಂತೆಯೇ ಉಳಿದ ಮಕ್ಕಳು ಗಾಬರಿಗೊಂಡು ಅಸ್ವಸ್ಥಗೊಂಡಿದ್ದಾರೆ.

ತಲೆನೋವು, ಹೊಟ್ಟೆನೋವಿನಿಂದ ಐದು ಮಕ್ಕಳು ಬಳಲುತ್ತಿದ್ದಾರೆ. ಐದು ಮಕ್ಕಳನ್ನು ಹೊರತುಪಡಿಸಿ ಎಪ್ಪತ್ತಾರು ಮಕ್ಕಳ ಆರೋಗ್ಯ ಸುಧಾರಿಸಿದೆ ಎಂದು ತಿಳಿದು ಬಂದಿದೆ. ಅಸ್ವಸ್ಥ ಮಕ್ಕಳಿಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News