ಡಿ.29: ನ್ಯಾಯಾಧೀಶರ ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ
Update: 2021-12-28 19:39 IST
ಮಂಗಳೂರು, ಡಿ.28: ದ.ಕ. ಜಿಲ್ಲಾ ನ್ಯಾಯಾಂಗ ಹಾಗೂ ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಿ.29ರ ಪೂ. 11:15ಕ್ಕೆ ಬಂಟ್ವಾಳ ತಾಲೂಕಿನ ಬಿ ಮೂಡಗ್ರಾಮದ ಪರ್ಲಿಯಾ ರಸ್ತೆಯಲ್ಲಿ ನಿರ್ಮಿಸಲಾಗುವ ನ್ಯಾಯಾಧೀಶರುಗಳ ವಸತಿ ಗೃಹಗಳ 2ನೇ ಹಂತದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಶಂಕುಸ್ಥಾಪನೆ ನೆರವೇರಿಸುವರು. ಅತಿಥಿಗಳಾಗಿ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನ್ಯಾ.ರಿತುರಾಜ್ ಅವಸ್ಥಿ ಭಾಗವಹಿಸುವರು. ರಾಜ್ಯ ಹೈಕೋರ್ಟ್ ನ್ಯಾಯಾಧೀಶ ಮತ್ತು ದ.ಕ. ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ಹೈಕೋರ್ಟ್ ನ್ಯಾಯಾಧೀಶ ಮುಹಮ್ಮದ್ ನವಾಝ್, ಸುಪ್ರೀಂಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.