ಪದ್ಮಶ್ರೀ ಪುರಸ್ಕೃತ ಹಾಜಬ್ಬರ ನಿವಾಸಕ್ಕೆ ಸ್ಟಂಟ್ ಮಾಸ್ಟರ್ ರಾಮ್ ಶೆಟ್ಟಿ ಭೇಟಿ

Update: 2021-12-28 17:03 GMT

ಮಂಗಳೂರು, ಡಿ.28: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ನಿವಾಸಕ್ಕೆ ಹಿಂದಿ ಚಿತ್ರರಂಗದ ಸಾಹಸ ನಿರ್ದೇಶಕ ಹಾಗೂ ಚಲನಚಿತ್ರ ನಿರ್ಮಾಪಕ ಸ್ಟಂಟ್ ಮಾಸ್ಟರ್ ರಾಮ್ ಶೆಟ್ಟಿ ಭೇಟಿ ನೀಡಿದರು.

ಬಳಿಕ ಹರೇಕಳ ನ್ಯೂಪಡ್ಪುಹಿ.ಪ್ರಾ. ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಮಹೇಶ್ ಮೋಟಾರ್ಸ್ ಮಾಲಕ ಎ.ಕೆ.ಜಯರಾಮ ಶೇಖ, ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಪತ್ರಕರ್ತ ಗುರುವಪ್ಪ ಬಾಳೆಪುಣಿ ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News