ಬೆಂಗಳೂರು: ಡಾಬಾ ಸಿಬ್ಬಂದಿಗೆ ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು
Update: 2021-12-28 23:00 IST
ಬೆಂಗಳೂರು, ಡಿ.28: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಡಾಬಾ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಹಾಸನ ಮೂಲದ ಮನೋಜ್ (28) ಮೃತ ಸಿಬ್ಬಂದಿ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು ಉತ್ತರ ಯಲಹಂಕ ತಾಲೂಕಿನ ಬ್ಯಾಲಕೆರೆ ಬಳಿಯ ಡಾಬಾದ ಮೇಲೆ ಕಳೆದ ಮೂರು ದಿನಗಳ ಹಿಂದೆ ಅಪರಿಚಿತರು ದಾಳಿ ಮಾಡಿದ್ದು, ಡಾಬಾ ಸಿಬ್ಬಂದಿ ಮನೋಜ್‍ಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮನೋಜ್‍ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.