ಮೈಸೂರು ವಿಶ್ವವಿದ್ಯಾನಿಲಯದ ವಿದೇಶಿ ವಿದ್ಯಾರ್ಥಿಗೆ ಒಮೈಕ್ರಾನ್ ಪತ್ತೆ

Update: 2021-12-28 18:04 GMT

ಮೈಸೂರು,ಡಿ.28: ಮೈಸೂರು ವಿಶ್ವವಿದ್ಯಾನಿಲಯದ ವಿದೇಶಿ ವಿದ್ಯಾರ್ಥಿ ಓರ್ವನಿಗೆ ಒಮೈಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ತಾಂಜೇನಿಯಾ ದೇಶದಿಂದ ಬಂದಿದ್ದ ವಿದ್ಯಾರ್ಥಿನಿಯಲ್ಲಿ ಒಮೈಕ್ರಾನ್ ಪತ್ತೆಯಾಗಿದೆ. ಡಿಸೆಂಬರ್ 20ರಂದು ವಿದ್ಯಾರ್ಥಿನಿ ಆಗಮಿಸಿದ್ದು, ಈ ನಡುವೆ ಪರೀಕ್ಷೆ ವೇಳೆ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ವಿದ್ಯಾರ್ಥಿನಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರ ಗುರುತು ಪತ್ತೆಗೆ ಮೈಸೂರು ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಂಡಿದೆ.

ಇನ್ನು ಸೋಂಕಿತ  ವಿದೇಶಿ ವಿದ್ಯಾರ್ಥಿನಿಯನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಈ ಮೂಲಕ ಮೈಸೂರಿನಲ್ಲಿ ಇಬ್ಬರಿಗೆ ಒಮೈಕ್ರಾನ್ ಇರುವುದು ಪತ್ತೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News