ಎರಡು -ಮೂರು ಬಾರಿ ಸಚಿವರಾದವರು ಹೊಸಬರಿಗೆ ಸಚಿವ ಸ್ಥಾನ ಬಿಟ್ಟುಕೊಡಲಿ: ಶಾಸಕ ರೇಣುಕಾಚಾರ್ಯ

Update: 2021-12-29 11:25 GMT
ಫೈಲ್ ಚಿತ್ರ- ಎಂ.ಪಿ ರೇಣುಕಾಚಾರ್ಯ 

ಬೆಂಗಳೂರು, ಡಿ. 29: ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಗುಸುಗುಸು ಸುದ್ದಿ ಬೆನ್ನಲೇ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಈ ಹಿಂದೆ ಎರಡು-ಮೂರು ಬಾರಿ ಸಚಿವರಾಗಿ, ಈಗಲೂ ಸಚಿವರಾಗಿರುವವರು ತಮ್ಮ ಸ್ಥಾನವನ್ನು ಹೊಸಬರಿಗೆ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿರುವುದು ಕುತೂಹಲ ಸೃಷ್ಟಿಸಿದೆ.

ಬುಧವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡಿ ಎಂದು ಕೇಳುವುದಿಲ್ಲ. ಅದರ ಆಸೆಯೂ ನನಗಿಲ್ಲ. ಹೊಸ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಅನುಭವಿ ನಾಯಕರು ಪಕ್ಷ ಸಂಘಟನೆ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಪಕ್ಷಕ್ಕೆ ಅನುಕೂಲ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಚಿವ ಸಂಪುಟ ವಿಸ್ತರಣೆ ಮಾಡಬೇಕು. ನನಗೆ ಸಚಿವ ಸ್ಥಾನಕ್ಕಿಂತ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದ ರೇಣುಕಾಚಾರ್ಯ, ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಅವಕಾಶವನ್ನೇ ನೀಡಿಲ್ಲ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಅಡ್ಡಗಾಲು ಹಾಕಿತು ಎಂದು ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News