×
Ad

​ದ.ಕ. ಜಿಲ್ಲೆ: 33 ಮಂದಿಗೆ ಕೋವಿಡ್ ಪಾಸಿಟಿವ್

Update: 2021-12-29 19:39 IST

ಮಂಗಳೂರು, ಡಿ.29: ದ.ಕ.ಜಿಲ್ಲೆಯಲ್ಲಿ ಬುಧವಾರ 33 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 13 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.46 ದಾಖಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ 1,16,341 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,498 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,700 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 143 ಸಕ್ರಿಯ ಪ್ರಕರಣವಿದೆ.

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 91,574 ಪ್ರಕರಣ ದಾಖಲಿಸಿ, 1,10,51,670 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News