×
Ad

​ಮೆಹಂದಿ ಘಟನೆ: ಸಚಿವೆ ಶೋಭಾ ಖಂಡನೆ

Update: 2021-12-29 20:10 IST

ಉಡುಪಿ, ಡಿ.29: ಕೋಟತಟ್ಟು ಗ್ರಾಪಂ ವ್ಯಾಪ್ತಿಯ ಕೊರಗ ಸಮುದಾಯದ ಮದುವೆ ಮನೆಗೆ ಮೆಹಂದಿ ಸಂದರ್ಭದಲ್ಲಿ ನುಗ್ಗಿ ಮದುಮಗನೂ ಸೇರಿದಂತೆ ಹಲವರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ಅಮಾನವೀಯ ಕೃತ್ಯವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಖಂಡಿಸಿದ್ದಾರೆ.

ಇಂತಹ ದುರ್ವರ್ತನೆಯನ್ನು ಸಹಿಸಲು ಅಸಾಧ್ಯ. ಮೆಹಂದಿ ಕಾರ್ಯಕ್ರಮ ದಲ್ಲಿ ಡಿ.ಜೆ. ಹಾಕಿರುವ ನೆಪವೊಡ್ಡಿ ಆಕ್ಷೇಪ ವ್ಯಕ್ತಪಡಿಸಿ ಅನಗತ್ಯ ಲಾಠಿ ಚಾರ್ಜ್ ಮಾಡಿರುವ ಪೊಲೀಸರು ಮತ್ತು ಕರ್ತವ್ಯದಲ್ಲಿದ್ದ ಸಬ್ ಇನ್‌ಸ್ಪೆಕ್ಟರ್ ವಿರುದ್ಧ ಅಗತ್ಯ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅದರಂತೆ ಪಿಎಸ್‌ಐ ಸಂತೋಷ್ ಅವರನ್ನು ಕರ್ತವ್ಯದಿಂದ ಅಮಾನತ್ತುಗೊಳಿಸಲಾಗಿದೆ.

ಅಲ್ಲದೇ ಐವರು ಸಿಬ್ಬಂದಿಗಳನ್ನು ಠಾಣೆಯಿಂದ ವರ್ಗಾಯಿಸಲಾಗಿದ್ದು, ಇಂತಹ ಘಟನೆಗಳು ಪುನಃ ಮರುಕಳಿಸಲು ಅವಕಾಶ ನೀಡದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವೆ ಅವರ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News