ಜ.2: ‘ಸ್ವಚ್ಛ ಸುರತ್ಕಲ್ ಅಭಿಯಾನ -3’ ಆರಂಭ

Update: 2021-12-29 14:46 GMT

ಸುರತ್ಕಲ್, ಡಿ.29: ನಾಗರಿಕ ಸಲಹಾ ಸಮಿತಿ (ರಿ) ಸುರತ್ಕಲ್ ನೇತೃತ್ವದಲ್ಲಿ ರಾಮಕೃಷ್ಣ ಮಿಷನ್ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ರೋಟರಿ ಕ್ಲಬ್ ಸುರತ್ಕಲ್, ವಿದ್ಯಾದಾಯಿನಿ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಕೇಂದ್ರ (ವಿರಾಟ್) ಇದರ ಸಹಯೋಗದಲ್ಲಿ ಎಂಆರ್‌ಪಿಎಲ್ ಪ್ರಾಯೋಜಕತ್ವದಲ್ಲಿ ಸ್ವಚ್ಛ ಸುರತ್ಕಲ್ ಅಭಿಯಾನ-3 ಇದರ ಉದ್ಘಾಟನೆಯು ಜ.2ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ ಎಂದು ಸಮಿತಿ ಕಾರ್ಯದರ್ಶಿ ಸತೀಶ್ ಸದಾನಂದ ಸುದ್ದಿಗೋಷ್ಟಿಯಲ್ಲಿ ಹೇಳಿದರು.

ಸಮಿತಿಯು ಸ್ವಚ್ಛ ಸುರತ್ಕಲ್ 1 ಮತ್ತು 2ರ ಮೂಲಕ 60ಕ್ಕೂ ಮಿಕ್ಕಿ ಶ್ರಮದಾನ, 51 ಕಸ ಬೀಳುವ ಜಾಗ ಸುಂದರೀಕರಣ, 40ಕ್ಕೂ ಹೆಚ್ಚು ಸ್ವಚ್ಛತಾ ಸಂಪರ್ಕ ಅಭಿಯಾನದ ಮೂಲಕ ಮನೆಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಗೊಬ್ಬರವನ್ನಾಗಿಸುವ ಪ್ರಾತ್ಯಕ್ಷಿಕೆ, 600ಕ್ಕೂ ಹೆಚ್ಚು ರಿಯಾಯಿತಿ ದರದಲ್ಲಿ ಮಡಿಕೆ ವಿತರಣೆ, ಪಾಳುಬಿದ್ದ ಬಾವಿ ಪುನಃ ನಿರ್ಮಾಣ, ವಿದ್ಯಾದಾಯಿನಿ ಪ್ರೌಢಶಾಲೆ ಹಾಗೂ ಕಾಟಿಪಳ್ಳ ಪ್ರಾಥಮಿಕ ಅರೋಗ್ಯ ಕೇಂದ್ರ ವಠಾರದಲ್ಲಿ 2 ಮಿಯಾವಾಕಿ ಅರಣ್ಯ ನಿರ್ಮಾಣ ನಿರ್ವಹಣೆ ಮುಂತಾದ ಕಾರ್ಯಗಳನ್ನು ಹಮ್ಮಿಕೊಂಡಿದೆ. ಈ ಬಾರಿಯ ಸ್ವಚ್ಚತಾ ಕಾರ್ಯದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕೈ ತೋಟ ತರಬೇತಿ ನೀಡಿ ಪ್ರೋತ್ಸಾಹಿಸಲಾಗುವುದು ಎಂದರು.

ಇದೀಗ ಮೂರನೇ ಹಂತದ ಅಭಿಯಾನವನ್ನು ರಾಮಕೃಷ್ಣ ಮಿಷನ್ ಮಂಗಳೂರಿನ ಏಕಗಮ್ಯಾನಂದಜೀ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಡಾ. ಕೆ. ರಾಜಮೋಹನ್ ರಾವ್ ವಹಿಸಲಿದ್ದು, ಅತಿಥಿಗಳಾಗಿ ಪೊಲೀಸ್ ನಿರೀಕ್ಷಕ ಮಂಜುನಾಥ್, ನಾಗರಿಕ ಸಲಹಾ ಸಮಿತಿ ಗೌರವಾಧ್ಯಕ್ಷ ಜೆ.ಡಿ.ವೀರಪ್ಪ, ಗೋವಿಂದದಾಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಟಿಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಾಂತ್ ಮರಾಟೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News