×
Ad

ಮಂಗಳೂರು: ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ

Update: 2021-12-29 22:38 IST

ಮಂಗಳೂರು, ಡಿ.29: ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಹಿನ್ನಲೆಯಲ್ಲಿ ವಿಶ್ವಮಾನವ ದಿನವನ್ನು ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು.

ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದ ಜಿಲ್ಲಾಧಿಕಾರಿಡಾ.ರಾಜೇಂದ್ರ ಕೆ.ವಿ. ಕನ್ನಡ ಭಾಷೆ ಹಾಗೂ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ. ಸಮಾಜಕ್ಕೆ ವಿಶ್ವ ಮಾನವ ಪ್ರಜ್ಞೆ ನೀಡಿದ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಕರೆ ನೀಡಿದರು.

ದ.ಕ.ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News