×
Ad

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿ 12, ಕಾಂಗ್ರೆಸ್ 5, ಎಸ್.ಡಿ.ಪಿ.ಐ. 1ರಲ್ಲಿ ಗೆಲುವು

Update: 2021-12-30 10:21 IST

ಬಂಟ್ವಾಳ, ಡಿ.30: ವಿಟ್ಲ ಪಟ್ಟಣ ಪಂಚಾಯತ್ ನ 18 ವಾರ್ಡ್ ಗಳಿಗೆ ಡಿ.27ರಂದು ನಡೆದ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರ ಬಿದ್ದಿದ್ದು ಬಿಜೆಪಿಯ 12, ಕಾಂಗ್ರೆಸ್ ನ 5, ಎಸ್.ಡಿ.ಪಿ.ಐ.ನ 1 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 

18 ವಾರ್ಡ್ ಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ 5 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದೆ. 18 ವಾರ್ಡ್ ಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 12 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದೆ. 4 ವಾರ್ಡ್ ಗಳಲ್ಲಿ ಸ್ಪರ್ಧಿಸಿದ್ದ ಎಸ್.ಡಿ.ಪಿ.ಐ. 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. 2 ವಾರ್ಡ್ ಗಳಲ್ಲಿ ಸ್ಪರ್ಧಿಸಿದ್ದ 2 ಪಕ್ಷೇತರ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ. 

18 ಸ್ಥಾನಗಳ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ 12 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದ್ದು ಎರಡನೇ ಬಾರಿಗೆ ಅಧಿಕಾರ ನಡೆಸಲು ಮುಂದಾಗಿದೆ. 

1ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಮುಹಮ್ಮದ್ ಅಶ್ರಫ್ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ಗೌಡ ಸೋಲು ಕಂಡಿದ್ದಾರೆ. 

2ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಸಂಗೀತ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಮಲಾಕ್ಷಿ ಮತ್ತು ಎಸ್.ಡಿ.ಪಿ.ಐ. ಅಭ್ಯರ್ಥಿ ಆಯಿಷಾ ಎನ್. ಸೋಲು ಕಂಡಿದ್ದಾರೆ. 

3ನೇ ವಾರ್ಡ್‌ ನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಚ್.ಜಯಂತ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಶೆಟ್ಟಿ ಸೋಲು ಕಂಡಿದ್ದಾರೆ. 

4ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ರಕ್ಷಿತಾ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಆಯಿಷಾ ಸೋಲು ಕಂಡಿದ್ದಾರೆ. 

5ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವಸಂತ ಕೆ. ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ವಸಂತಿ ಸೋಲು ಕಂಡಿದ್ದಾರೆ. 

6ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವಿಜಯಲಕ್ಷ್ಮಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಲೀಲಾವತಿ ಸೋಲು ಕಂಡಿದ್ದಾರೆ. 

7ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ರವಿಪ್ರಕಾಶ್ ಎಸ್. ಗೆಲುವು ಸಾಧಿಸಿದ್ದು , ಕಾಂಗ್ರೆಸ್ ಅಭ್ಯರ್ಥಿ ಶಿವಪ್ರಸಾದ್ ವಿ. ಸೋಲು ಕಂಡಿದ್ದಾರೆ. 

8ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಸುನಿತಾ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನಿತಾ ಕೋಟ್ಯಾನ್, ಎಸ್.ಡಿ.ಪಿ.ಐ. ಅಭ್ಯರ್ಥಿ ರಝಿಯಾ ಸೋಲು ಕಂಡಿದ್ದಾರೆ. 

9ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಎನ್.ಕೃಷ್ಣ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶಿವಪ್ರಸಾದ್ ಸೋಲು ಕಂಡಿದ್ದಾರೆ. 

10ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಸುಮತಿ ಸೋಲು ಕಂಡಿದ್ದಾರೆ. 

11ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ ಎಂ. ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ವಿ., ಪಕ್ಷೇತರ ಅಭ್ಯರ್ಥಿ ಜಾನ್ ಡಿಸೋಜ ಸೋಲು ಕಂಡಿದ್ದಾರೆ. 

12ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಸಿ.ಎಚ್. ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಮೂಸಾ ಸೋಲು ಕಂಡಿದ್ದಾರೆ. 

13ನೇ ವಾರ್ಡ್ ನಲ್ಲಿ ಎಸ್.ಡಿ.ಪಿ.ಐ. ಅಭ್ಯರ್ಥಿ ಶಾಕಿರಾ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಸ್ಮಾ ಯು.ಕೆ., ಬಿಜೆಪಿ ಅಭ್ಯರ್ಥಿ ಪುಷ್ಪಾ ಸೋಲು ಕಂಡಿದ್ದಾರೆ. 

14ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಕುಮಾರ್ ಶೆಟ್ಟಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮನೋಹರ ಲ್ಯಾನ್ಸಿ ಡಿಸೋಜ, ಪಕ್ಷೇತರ ಅಭ್ಯರ್ಥಿ ಮೋಹನ್ ಸೇರಾಜೆ ಸೋಲು ಕಂಡಿದ್ದಾರೆ. 

15ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲತಾವೇಣಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಸಂಧ್ಯಾ ಗಣೇಶ್ ಸೋಲು ಕಂಡಿದ್ದಾರೆ. 

16ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡೀಕಯ್ಯ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ಸೋಲು ಕಂಡಿದ್ದಾರೆ. 

17ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಚರಣ್ ಸೋಲು ಕಂಡಿದ್ದಾರೆ. 

18ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ರಹ್ಮಾನ್ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ಮೂಲ್ಯ, ಎಸ್.ಡಿ.ಪಿ.ಐ. ಅಭ್ಯರ್ಥಿ ಸಯ್ಯದ್ ಇಲ್ಯಾಸ್ ಸೋಲು ಕಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News