ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪ.ಪಂಚಾಯತ್ ನ 14 ವಾರ್ಡ್ ಗಳಲ್ಲಿಯೂ ಪಕ್ಷೇತರ ಅಭ್ಯರ್ಥಿಗಳಿಗೆ ಗೆಲುವು

Update: 2021-12-30 06:42 GMT
ಫೈಲ್ ಫೋಟೊ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣ ಪಂಚಾಯತ್ ನ ಎಲ್ಲ 14 ವಾರ್ಡ್ ಗಳಲ್ಲಿಯೂ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಹಲವು ಕಡೆಗಳಲ್ಲಿ ಅಚ್ಚರಿ ಫಲಿಂತಾಶಗಳು ಹೊರಬರುತ್ತಿವೆ. ಎಂ.ಕೆ ಹುಬ್ಬಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಹದಿನಾಲ್ಕು ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.

ಒಟ್ಟು 14 ವಾರ್ಡ್ಗಳ ಪೈಕಿ ಮೂರು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. 11 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಇದೀಗ 11 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದ್ದು, ಎಲ್ಲ 11 ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News