×
Ad

ಎಂಆರ್ ಜಿ ಸಮೂಹ ಸಂಸ್ಥೆಯಯಿಂದ 635 ಕುಟುಂಬಗಳಿಗೆ ಆರ್ಥಿಕ ನೆರವು

Update: 2021-12-30 20:16 IST

ಮಂಗಳೂರು : ನನ್ನ ಸಂಪಾದನೆಯ ಒಂದು ಭಾಗವನ್ನು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಕಿಂಚಿತ್ ಸೇವೆಯ ಹೆಸರಿನಲ್ಲಿ ನೀಡುವುದರಲ್ಲಿ ತೃಪ್ತಿ ಇದೆ ಎಂದು ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಂಆರ್ ಜಿ ಗ್ರೂಪ್ ವತಿಯಿಂದ 635ಕ್ಕೂ ಅಧಿಕ ಕುಟುಂಬಗಳಿಗೆ ಒಂದೂವರೆ ಕೋಟಿ ರೂ. ಅಧಿಕ ಮೊತ್ತದ ಆರ್ಥಿಕ ನೆರವನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ಮಾಜಿ ಸಚಿವ ಅಭಯ ಚಂದ್ರ ಜೈನ್, ಮಾಜಿ ಶಾಸಕ ಐವನ್ ಡಿ ಸೋಜ, ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಸದಾನಂದ ಶೆಟ್ಟಿ, ಎ.ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ, ಗಣ್ಯರಾದ ಜಯರಾಜ್ ಹೆಗ್ಡೆ, ಜಯಕರ ಶೆಟ್ಟಿ ಇಂದ್ರಾಳಿ, ಪುರುಷೋತ್ತಮ ಶೆಟ್ಟಿ, ಸುರೇಶ್ ಶೆಟ್ಟಿ, ಗೌರವ ಶೆಟ್ಟಿ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಎಸಿಪಿ ಮಹೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಡಾ. ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ್ ಶೆಟ್ಟಿ ಗುರ್ಮೆ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News