ದ.ಕ. ಜಿಲ್ಲೆ; 30 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ: ಓರ್ವ ಮೃತ್ಯು
Update: 2021-12-31 18:58 IST
ಮಂಗಳೂರು, ಡಿ.31: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 30 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಇದೇ ವೇಳೆ 24 ಮಂದಿ ಇಂದು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸಕ್ತ 151 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ. 0.43 ಆಗಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 116382 ಮಂದಿಯಲ್ಲಿ ಕೋವಿಡ್ ಸೋಂಕು ಕಂಡು ಬಂದಿದೆ. ಈ ಪೈಕೆ 114530 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1701 ಮಂದಿ ಸೋಂಕಿನಿಂದ ಸಾನ್ನಪ್ಪಿದ್ದಾರೆ.