ಶಾಸಕರಿಂದ ಮಲ್ಪೆ ಮೀನುಗಾರಿಕಾ ಜಟ್ಟಿ ಕಾಮಗಾರಿ ಪರಿಶೀಲನೆ
ಮಲ್ಪೆ, ಡಿ.31: ಸುಮಾರು 9.6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಮಲ್ಪೆ ಮೀನುಗಾರಿಕಾ ಜಟ್ಟಿ ಕಾಮಗಾರಿ ಪ್ರದೇಶಕ್ಕೆ ಶಾಸಕ ಕೆ. ರಘುಪತಿ ಭಟ್ ಇಂದು ಭೇಟಿ ನಿೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಶಾಸಕರ ಶಿಫಾರಸ್ಸಿನ ಮೇರೆಗೆ ಮಲ್ಪೆ ಮೀನುಗಾರಿಕಾ ಜಟ್ಟಿ ನಿರ್ಮಾಣಕ್ಕೆ 9.60 ಕೋಟಿ ರೂ. ಮಂಜೂರಾಗಿ ಕಾಮಗಾರಿ ನಡೆಯುತ್ತಿದೆ. ಇಂದು ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ನಡೆದಿರುವ ಕಾಮಗಾರಿಗಳ ಬಗ್ಗೆ ವಿವರಗಳನ್ನು ಪಡೆದುಕೊಂಡರು.ಬಳಿಕ ಅಲ್ಲೇ ಸಮೀಪದಲ್ಲಿ ನದಿ ದಂಡೆ ಕಾಮಗಾರಿ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿ ಅರ ಪರಿಶೀಲನೆ ಯನ್ನೂ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸದಸ್ಯರಾದ ಎಡ್ಲಿನ್ ಕರ್ಕಡ, ಯೋಗೀಶ್ ಸಾಲ್ಯಾನ್, ಸುಂದರ ಕಲ್ಮಾಡಿ, ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ದಯಾನಂದ ಸುವರ್ಣ, ಉಪಾಧ್ಯಕ್ಷ ರಮೇಶ್ ಕೋಟ್ಯಾನ್, ಪ್ರಧಾನಕಾರ್ಯದರ್ಶಿ ರತ್ನಾಕರ ಸಾಲ್ಯಾನ್ ಹಾಗೂ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಉದಯ್‌ಕುಮಾರ್, ಸಹಾಯಕ ಅಭಿಯಂತರ ಜಯರಾಜ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್, ಸಹಾಯಕ ನಿರ್ದೇಶಕ ಶಿವಕುಮಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.