ಉಡುಪಿ: ಜ.1ರಂದು ಪೊಳಲಿ ಪ್ರಶಸ್ತಿ ಪ್ರದಾನ
Update: 2021-12-31 19:44 IST
ಉಡುಪಿ, ಡಿ.31: ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ.1ರ ಶನಿವಾರ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಬಾರಿಯ ಪ್ರಶಸ್ತಿಯನ್ನು ಸಂಶೋಧಕರು, ಲೇಖಕರೂ ಆದ ಡಾ. ವೈ.ಉಮಾನಾಥ ಶೆಣೈ ಇವರಿಗೆ ಪ್ರದಾನ ಮಾಡಲಾಗುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ ಎಸ್. ನಾಯ್ಕಾ ವಹಿಸಲಿದ್ದಾರೆ. ಎಂ.ಜಿ.ಎಂ ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ. ಮಾಲತಿ ಕೆ. ಮೂರ್ತಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ‘ತುಳುನಾಡಿನ ಇತಿಹಾಸದ ಸಾಮಾಜಿಕ ಹಾಗೂ ಆರ್ಥಿಕ ಅಯಾಮಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಪ್ರಶಸ್ತಿ ಸಮಿತಿಯ ಸದಸ್ಯರಾದ ಲೇಖಕಿ ಇಂದಿರಾ ಹೆಗ್ಡೆ ಉಪಸ್ಥಿತರಿರುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.