ಸ್ಕಾರ್ಫ್ ವಿವಾದ: ಕರ್ನಾಟಕ ಮುಸ್ಲಿಂ ಜಮಾಅತ್ ಖಂಡನೆ
ಉಡುಪಿ, ಡಿ.31: ಉಡುಪಿ ಸರಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕಿದ್ದಕ್ಕೆ ತರಗತಿಗೆ ಪ್ರವೇಶವನ್ನು ನಿರಾಕರಿಸಿ, ಕಳೆದ ನಾಲ್ಕು ದಿನಗಳಿಂದ ಆರು ವಿದ್ಯಾರ್ಥಿನಿಯರನ್ನು ತರಗತಿ ಪ್ರವೇಶಿಸಲು ಅವಕಾಶ ನೀಡದೆ ಇರುವುದು ಖಂಡನಾರ್ಹವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಜಿ.ಐ.ಓ ಮಾತುಕತೆ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ತರಗತಿಗೆ ನಿರಾಕರಣೆ ಮಾಡಿದ ಹಿನ್ನಲೆಯಲ್ಲಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ನಿಯೋಗ ಪ್ರಾಂಶುಪಾಲರ ಬಳಿ ತೆರಳಿ ವಿಚಾರದ ಕುರಿತು ಚರ್ಚಿಸಿತು.
ಆಡಳಿತ ಸಮಿತಿ, ಪೋಷಕರೊಂದಿಗೆ ಹಾಗೂ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಪ್ರಾಂಶುಪಾಲರು ಭರವಸೆ ನೀಡಿದ್ದಾರೆ. ಒಂದು ವೇಳೆ ಹಿಜಾಬ್ ನಿರಾಕರಣೆಯ ಆದೇಶವನ್ನು ಕಾನೂನು ಬಾಹಿರವಾಗಿ ಮುಂದುವರಿಸಿದ್ದಲ್ಲಿ ಕಾನೂನಾತ್ಮಕ ಹೋರಾಟ ಮುಂದುವರಿಸ ಲಾಗುವುದು ಎಂದು ಜಿಐಓ ಪ್ರಕಟಣೆಯಲ್ಲಿ ತಿಳಿಸಿದೆ.