ಬೆಳಗಾವಿ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ
Update: 2022-10-26 16:37 IST
ಬೆಳಗಾವಿ: ಕಲುಷಿತ ನೀರು ಕುಡಿದು 50 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ರಾಮದುರ್ಗಾ ತಾಲೂಕಿನ ಮದೇನೂರು ಗ್ರಾಮದಲ್ಲಿ ವರದಿಯಾಗಿದೆ.
ಅಸ್ವಸ್ಥರಾಗಿರುವ 50 ಕ್ಕೂ ಹೆಚ್ಚು ಜನರನ್ನು ರಾಮದುರ್ಗಾ ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ನಳಗಳಿಗೆ ನೀರು ಪೂರೈಸುವ ಪೈಪ್ ಲೈನ್ ಒಡೆದಿದ್ದು, ಪೈಪ್ ಮುಖಾಂತರ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸರಬರಾಜು ಆಗಿದೆ. ಇದರಿಂದಾಗಿ ಅವಘಡ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.