ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2022-01-01 14:59 GMT

ಬೆಂಗಳೂರು, ಜ.1: ರಾಜ್ಯ ಸರಕಾರವು ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಬಿ.ಎಚ್.ಅನಿಲ್ ಕುಮಾರ್ ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ಕ್ಯಾಪ್ಟನ್ ಮಣಿವಣ್ಣನ್ ಪಿ. ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ಸಲ್ಮಾ ಕೆ.ಫಹೀಮ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News