ಶೇ.50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

Update: 2022-01-01 17:42 GMT

ಬೆಂಗಳೂರು, ಜ.1: ಗಣರಾಜ್ಯೋತ್ಸವದ ಪ್ರಯುಕ್ತ 2022ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿದ ಪುಸ್ತಕಗಳನ್ನು ಶೇ.50 ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ನಗರದ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ ಸೇರಿದಂತೆ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಪುಸ್ತಕಗಳಿಗೆ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಜಾಲಾತಾಣ www.kannadapustakapradhikara.com ನಲ್ಲಿಯೂ ಮಾರಾಟ ಮಾಡಲಾಗುತ್ತಿದ್ದು, ಪುಸ್ತಕಗಳನ್ನು ಅಂಚೆಯ ಮೂಲಕ ಗ್ರಾಹಕರಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News