ಕೋಲಾರ: ದೇವಾಲಯದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Update: 2022-01-01 18:52 GMT
ಸಾಂದರ್ಭಿಕ ಚಿತ್ರ

ಕೋಲಾರ: ಇಲ್ಲಿನ ದೇವಾಲಯವೊಂದರಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. 

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀರಗಾನಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ವೇಳೆ ಪ್ರಸಾದವಾಗಿ ಚಿತ್ರಾನ್ನ ಹಾಗೂ ಕೇಸರಿಬಾತ್ ವಿತರಿಸಲಾಗಿದ್ದು,  ಪ್ರಸಾದ ಸೇವಿಸಿದ ಮಕ್ಕಳು ಸೇರಿದಂತೆ  50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ

ಸದ್ಯ ಅಸ್ವಸ್ಥಗೊಂಡವರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,  ತಾಲೂಕು ಆರೋಗ್ಯಾಧಿಕಾರಿ,  ಪೊಲೀಸರು ಭೇಟಿ ನೀಡಿದ್ದಾರೆ, 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News